ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2026 | 48 ಜವಾನ/ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Photo of author

Mantesh

Publish: August 28, 2026
Hassan District Court Recruitment 2026

share Share:

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಜವಾನ/ಅಟೆಂಡರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ. ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿ ತಿಳಿಯಿರಿ.

ಹಲೋ ಸ್ನೇಹಿತರೇ ನಮಸ್ಕಾರ, ಹತ್ತನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಸಿಕ್ಕಿದೆ. ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 48 ಜವಾನ/ಅಟೆಂಡರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಕ್ಷಿಪ್ತ ವಿವರ

  • ಸಂಸ್ಥೆ: ಹಾಸನ ಜಿಲ್ಲಾ ನ್ಯಾಯಾಲಯ
  • ಹುದ್ದೆ: ಜವಾನ/ಅಟೆಂಡರ್
  • ಒಟ್ಟು ಹುದ್ದೆಗಳು: 48
  • ಮಾಸಿಕ ವೇತನ: ರೂ. 27,000 – 46,675
  • ಅರ್ಜಿ ವಿಧಾನ: ಆನ್‌ಲೈನ್

ವಿದ್ಯಾರ್ಹತೆ

ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ (SSLC) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಮುಖ್ಯ ಮಾಹಿತಿ: ಇದು ಕೇವಲ SSLC ಅರ್ಹತೆಯುಳ್ಳವರಿಗೆ ಮೀಸಲಾದ ಸರ್ಕಾರಿ ಹುದ್ದೆಯಾಗಿದ್ದು, ಆಯ್ಕೆ ಪ್ರಕ್ರಿಯೆ ಸಂದರ್ಶನ ಆಧಾರಿತವಾಗಿದೆ.

ವಯೋಮಿತಿ

ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯಸ್ಸು ಹೊಂದಿರಬೇಕು.

  • ವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
  • SC/ST ಮತ್ತು ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ

ಅರ್ಜಿ ಶುಲ್ಕ

  • ಸಾಮಾನ್ಯ, 2A/2B/3A/3B, ಮಾಜಿ ಸೈನಿಕರು: ರೂ. 200/-
  • SC, ST, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇಲ್ಲ
  • ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ

SSLC ಅಂಕಗಳ ಆಧಾರದ ಮೇಲೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  1. ಹಾಸನ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  2. ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ಮತ್ತು ವಿದ್ಯಾರ್ಹತೆಯ ಮಾಹಿತಿ ಭರ್ತಿ ಮಾಡಿ.
  3. ಪಾಸ್‌ಪೋರ್ಟ್ ಸೈಜ್ ಫೋಟೋ, ಸಹಿ ಹಾಗೂ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
  4. ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಆನ್‌ಲೈನ್ ಮೂಲಕ ಪಾವತಿಸಿ.
  5. ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್‌ಔಟ್ ತೆಗೆದು ಭವಿಷ್ಯದ ಉಪಯೋಗಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ: 19-08-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಸೆಪ್ಟೆಂಬರ್-2026

ಲಿಂಕ್‌ಗಳು

ವಿವರಲಿಂಕ್
ಅಧಿಕೃತ ಅಧಿಸೂಚನೆNotification PDF
ಆನ್‌ಲೈನ್ ಅರ್ಜಿApply Online
WhatsAppJoin Now
TelegramJoin Now

Join
Join WhatsApp Group