CISF Head Constable Recruitment 2025: CISF ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ.

Photo of author

Mantesh

Publish: May 28, 2025
CISF Head Constable Recruitment 2025

share Share:

CISF Head Constable Recruitment 2025: CISF ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನಲ್ಲಿ ಇದೀಗ ಖಾಲಿ ಇರುವ 403 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರಸ್ತುತ ಈ ಲೇಖನದಲ್ಲಿ ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಈ ಲೇಖನವನ್ನು ಸಂಪೂರ್ಣವಾಗಿ ಓದಿ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳಿಗಾಗಿ ಇಂದೇ ನಮ್ಮ ಟೆಲಿಗ್ರಾಂ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ;

ಹುದ್ದೆಯ ವಿವರ: CISF Head Constable Recruitment 2025

ಭಾರತೀಯ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಇದೀಗ ಖಾಲಿ ಇರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿಯನ್ನು ಸಹ ಆಹ್ವನಿಸಲಾಗಿದೆ. ಆಸಕ್ತಿ ಹೊಂದಿರುವ ಮತ್ತು ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

COVID-19 New Variant: ಮತ್ತೆ ಬಂತು ಕೊರೋನಾ ವೈರಸ್…!

ಅರ್ಹತಾ ಮಾನದಂಡಗಳು: CISF Head Constable Eligibility Criteria

ಶೈಕ್ಷಣಿಕ ಅರ್ಹತೆ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನಲ್ಲಿ ಖಾಲಿ ಇರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ: CISF Recruitment 2025 Age Limit

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಸಾಮಾನ್ಯವಾಗಿ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

  • ಮೊದಲನೆಯ ಹಂತದಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕು.
  • ನಂತರ ಅದರಲ್ಲಿ “Apply Online” ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ನಂತರದಲ್ಲಿ ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿಕೊಳ್ಳಬೇಕು.
  • ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ಯುಆರ್/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ: 1000 ರೂ.
  • SC/ST ಅಭ್ಯರ್ಥಿಗಳಿಗೆ: ಇಲ್ಲ
  • ಪಾವತಿ ಮೋಡ್: ಆನ್‌ಲೈನ್
  • ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅದನ್ನು ಪ್ರಿಂಟ್ ತೆಗೆದುಕೊಳ್ಳಬೇಕು.

ಅಧಿಕೃತ ವೆಬ್ಸೈಟ್ ಲಿಂಕ್ : Click here

ಅರ್ಜಿ ಸಲ್ಲಿಸಲು: Click here

CISF ಹೆಡ್ ಕಾನ್ಸ್ಟೇಬಲ್ ನೇಮಕಾತಿ 2025 ರ ಅಧಿಸೂಚನೆ PDF: Click here

ಆಯ್ಕೆ ಪ್ರಕ್ರಿಯೆ ಹೇಗೆ?

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (CISF-CISF Head Constable Recruitment 2025) ಕಾರ್ಯನಿರ್ವಹಿಸ ಬಯಸುವ ಅಭ್ಯರ್ಥಿಗಳು ಮೊದಲಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ಎದುರಿಸಬೇಕಾಗುತ್ತದೆ. ನಂತರದಲ್ಲಿ ಪ್ರಾಯೋಗಿಕ ಪರೀಕ್ಷೆ ಮತ್ತು ದಾಖಲಾತಿಗಳ ಪರೀಕ್ಷೆ ಮಾಡಿಕೊಂಡ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/05/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/06/2025

Join

Leave a Comment